ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ: ಹರಿದ ಅಂಗಿ ಸಮೇತ ಕೆಸಿ ವೇಣುಗೋಪಾಲ್, ಇತರೆ ನಾಯಕರು ಪೊಲೀಸ್ ವಶಕ್ಕೆ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ  ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.
ಕೆ.ಸಿ ವೇಣುಗೋಪಾಲ್ ಮತ್ತಿರರು
ಕೆ.ಸಿ ವೇಣುಗೋಪಾಲ್ ಮತ್ತಿರರು

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ  ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.

ಹೌದು...ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್‍ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇದೇ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಸಂಸದ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಕೆ.ಸಿ.ವೇಣುಗೋಪಾಲ್  ಅವರ ಅಂಗಿ ಹರಿದಿದೆ. ಹರಿದ ಅಂಗಿ ಸಮೇತವೇ ಪೊಲೀಸರು ಅವರನ್ನು ವಶಕ್ಕೆ ಪಡೆದು ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವೇಣುಗೋಪಾಲ್ ಅವರು ಕೂಡ ಕೆಲಕಾಲ ಅಸ್ವಸ್ಥರಾಗಿದ್ದರು ಎಂದು ಹೇಳಲಾಗಿದೆ. 

ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com