ಕೇರಳ ಸಿಎಂಗೆ ಇರಿಸುಮುರಿಸು: ವಿಮಾನ ಪ್ರಯಾಣ ವೇಳೆ ಪಿಣರಾಯಿ ವಿಜಯನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ, ವಿಡಿಯೋ!

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗ್ತಿದೆ.
ಪ್ರತಿಭಟನೆಯ ದೃಶ್ಯ
ಪ್ರತಿಭಟನೆಯ ದೃಶ್ಯ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗ್ತಿದೆ.

ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಅಂಗಿ ಧರಿಸಿ ಅವರ ವಿರುದ್ಧ ವಿಮಾನದಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಶಬರಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕಾಂಗ್ರೆಸ್ ಯುವ ಸಂಘಟನೆಯ ಇಬ್ಬರು ಕಾರ್ಯಕರ್ತರು ಮುಖ್ಯಮಂತ್ರಿ ವಿಜಯನ್ ರಾಜೀನಾಮೆ ಕೋರಿ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಮತ್ತು ಮುಖ್ಯಮಂತ್ರಿ ಜೊತೆಗಿದ್ದ ವ್ಯಕ್ತಿ ಅವರನ್ನು ತಳ್ಳುವುದನ್ನ ಕಾಣಬಹುದು.    ಪ್ರತಿಭಟನಾನಿರತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳಿದವರು ಹಿರಿಯ ಸಿಪಿಐ(ಎಂ) ನಾಯಕ ಮತ್ತು ಎಲ್‌ಡಿಎಫ್ ಸಂಚಾಲಕ ಇ.ಪಿ. ಜಯರಾಜನ್ ಎಂದು ಶಬರಿನಾಥನ್ ಆರೋಪಿಸಿದ್ದಾರೆ.

ಯೂತ್ ಕಾಂಗ್ರೆಸ್ ಕಾರ್ಯಕರ್ತರು ವಿಮಾನದೊಳಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಸಿಪಿಐ(ಎಂ) ಮುಖಂಡರೊಬ್ಬರು ಆರೋಪಿಸಿದ್ದಾರೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪ್ರಯಾಣಿಕರಂತೆ ಪೋಸ್ ಕೊಟ್ಟ ಪ್ರತಿಭಟನಾಕಾರರು ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಿದ್ದಾರೆ ಎಂದು ವರದಿಯಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ಕೆಲವು ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಸಿಎಂ ಮತ್ತು ಅವರ ಕುಟುಂಬ ಸದಸ್ಯರ ಪಾತ್ರವಿದೆ ಎಂದು ಹೇಳಿಕೊಂಡಿದ್ದರಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯನ್ನು ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com