200ಕ್ಕೂ ಹೆಚ್ಚು ಮಂದಿ ಬಂಧನ, ಪಶ್ಚಿಮ ಬಂಗಾಳದ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಡಿಜಿಪಿ

ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪಶ್ಚಿಮ ಬಂಗಾಳ ಡಿಜಿಪಿ ಮನೋಜ್ ಮಾಳವೀಯ ಅವರು..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪಶ್ಚಿಮ ಬಂಗಾಳ ಡಿಜಿಪಿ ಮನೋಜ್ ಮಾಳವೀಯ ಅವರು ಸೋಮವಾರ ಹೇಳಿದ್ದಾರೆ.

ಇಂದು ಪಶ್ಚಿಮ ಬಂಗಾಳ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಾಳವೀಯ ಅವರು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಭಾಗಗಳಿಂದ 200ಕ್ಕೂ ಹೆಚ್ಚು ಜನರನ್ನು ಬಂಧಿಸಿಲಾಗಿದೆ ಮತ್ತು 42 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಶುಕ್ರವಾರ ಹೌರಾ ಮತ್ತು ಮುರ್ಷಿದಾಬಾದ್ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಈ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಪ್ರವಾದಿ ಮೊಹಮ್ಮದ್ ಕುರಿತು ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಹೌರಾದ ಕೆಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com