ನ್ಯಾಷನಲ್ ಹೆರಾಲ್ಡ್ ಕೇಸ್: ಸತತ 2.5 ಗಂಟೆ ರಾಹುಲ್ ಗಾಂಧಿ ವಿಚಾರಣೆ; ಭೋಜನ ವಿರಾಮದ ಬಳಿಕ ಮುಂದುವರಿಕೆ!

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.

ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿದ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಹೋಗಿ ವಿಚಾರಣೆಗೆ ಹಾಜರಾರದರು. ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನ 2:10ರ ಸುಮಾರಿಗೆ ಊಟಕ್ಕೆ ತೆರಳಲು ಅವರಿಗೆ ಅವಕಾಶ ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.

51ರ ಹರೆಯದ ಗಾಂಧಿ ಅವರು ಮತ್ತೆ ವಿಚಾರಣೆಗೆ ಹಾಜರಾಗುವ ನಿರೀಕ್ಷೆಯಿದ್ದು, ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಯ ರೆಕಾರ್ಡಿಂಗ್ ಅನ್ನು ಪುನರಾರಂಭಿಸಲಿದ್ದಾರೆ. 

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಪಕ್ಷದ ಪ್ರಚಾರದಲ್ಲಿ ಹಣಕಾಸು ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com