
ಪಿ ಚಿದಂಬರಂ
ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ರಾಹುಲ್ ಬೆಂಬಲಕ್ಕೆ ಕಾಂಗ್ರೆಸ್ ದೆಹಲಿಯ ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸಿತ್ತು.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: 9 ಗಂಟೆ ವಿಚಾರಣೆ ಬಳಿಕ ನಾಳೆಯೂ ರಾಹುಲ್ ಗಾಂಧಿಗೆ ಇಡಿ ಡ್ರಿಲ್!
ಅದರಲ್ಲಿ ಪಿ. ಚಿದಂಬರಂ ಕೂಡ ಸೇರಿಕೊಂಡರು. ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ್ದರಿಂದ ಚಿದಂಬರಂ ಅವರಿಗೆ ಗಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೋದಿ ಸರಕಾರ ಅನಾಗರಿಕತೆಯ ಎಲ್ಲ ಮಿತಿಗಳನ್ನು ದಾಟಿದೆ. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಪೊಲೀಸರು ಹೊಡೆದಿದ್ದಾರೆ. ಕನ್ನಡಕವನ್ನು ನೆಲಕ್ಕೆ ಎಸೆದಿದ್ದಾರೆ. ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ ಎಂದು ಆರೋಪಿಸಿದ್ದಾರೆ.