ಪೊಲೀಸರೊಂದಿಗೆ ಡಿಕೆ ಸುರೇಶ್ ಮಾತಿನ ಚಕಮಕಿ
ಪೊಲೀಸರೊಂದಿಗೆ ಡಿಕೆ ಸುರೇಶ್ ಮಾತಿನ ಚಕಮಕಿ

ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಹಿಂಬದಿಯಿಂದ ಡಿಕೆ ಸುರೇಶ್ ತಳ್ಳಿದ ಪೊಲೀಸ್- ವಿಡಿಯೋ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್  ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್  ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಡಿ. ಕೆ. ಸುರೇಶ್ ಹಾಗೂ ಪೊಲೀಸರೊಂದಿಗೆ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ. ಪೊಲೀಸರೊಬ್ಬರು ಹಿಂಬದಿಯಿಂದ ತಳ್ಳಿದ್ದಾರೆ. ಬಳಿಕ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ , ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ.  ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ. ಆ ಬದ್ಧತೆ ನಮಗಿದೆ ಎಂದು ಟ್ವೀಟ್ ನಲ್ಲಿ ಹೇಳಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com