ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
Published: 14th June 2022 08:44 AM | Last Updated: 14th June 2022 11:04 AM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಕಣಿವೆ ನಾಡಿನಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವ ಬೆನ್ನಲ್ಲೇ ಭಯೋತ್ಪಾದಕರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆ
ಜೂನ್ 30ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಈ ಉಗ್ರರು ಸಂಚು ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಮೂವರು ಉಗ್ರರು ಯೋಜನೆ ರೂಪಿಸಿದ್ದರು. ಪಾಕಿಸ್ತಾನದ ಇಬ್ಬರು ಉಗ್ರರು ಹಾಗೂ ಒಬ್ಬ ಸ್ಥಳೀಯ ಉಗ್ರ ಸೇರಿ ರೂಪಿಸಿದ್ದ ಯೋಜನೆಯನ್ನು ವಿಫಲಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.