
ಕೋವಿಡ್-19
ನವದೆಹಲಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸೋಂಕು ಏರಿಕೆಯಾಗತೊಡಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿಗೆ ಗುರಿಯಾಗಿದ್ದ ಇಬ್ಬರು ಸಾವನ್ನಪ್ಪಿದ್ದು, 500 ಮಂದಿ ಚೇತರಿಸಿಕೊಂಡಿದ್ದಾರೆ. 3,177 ಮಂದಿ ಸಕ್ರಿಯ ಪ್ರಕರಣಗಳಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,594 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಸೋಮವಾರದಂದು 8,084 ಸೋಂಕು ವರದಿಯಾಗಿತ್ತು.