ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತ
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ.
Published: 15th June 2022 08:42 AM | Last Updated: 15th June 2022 01:23 PM | A+A A-

ಸಾಂದರ್ಭಿಕ ಚಿತ್ರ
ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ.
ಹತ್ಯೆಯಾದ ಇಬ್ಬರು ಉಗ್ರರನ್ನು ತುಫೈಲ್ ಗನೈ ಮತ್ತು ಜನ್ ಮೊಹ್ದ್ ಲೊನ್ ಎಂದು ಗುರುತಿಸಲಾಗಿದ್ದು ಎನ್ ಕೌಂಟರ್ ಬಳಿಕ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ 1 ಎಕೆ 47 ರೈಫಲ್ ಮತ್ತು ಪಿಸ್ತೂಲ್ ಸೇರಿದಂತೆ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ರಾಜಸ್ತಾನದ ಹನುಮಂಗರ್ ನ ನಿವಾಸಿಯಾಗಿರುವ ವಿಜಯ್ ಕುಮಾರ್ ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಡಹಗಲೇ ಉಗ್ರರು ಅವರನ್ನು ಗುಂಡಿಕ್ಕಿ ಕೊಂದಿದ್ದರು.