ಜೂನ್ 17ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್; ದೆಹಲಿ ಪೊಲೀಸರದ್ದು ಗೂಂಡಾಗಿರಿ ಎಂದ ಕಾಂಗ್ರೆಸ್!

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಮೂರನೇ ದಿನವೂ ಮುಂದೂವರೆದಿದ್ದು ಸುಮಾರು ಎಂಟು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಮೂರನೇ ದಿನವೂ ಮುಂದೂವರೆದಿದ್ದು ಸುಮಾರು ಎಂಟು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. 

ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ಕೇಂದ್ರ ಕಚೇರಿಗೆ ಬೆಳಗ್ಗೆ ಹಾಜರಾದ 51 ವರ್ಷದ ರಾಹುಲ್ ಗಾಂಧಿ ಅವರು ಸುಮಾರು 8 ಗಂಟೆಗಳ ಕಾಲ ವಿಚಾರಣೆ ಎದುರಿಸಿ ರಾತ್ರಿ 9:30ರ ಸುಮಾರಿಗೆ ಕಚೇರಿಯಿಂದ ಹೊರಟರು.

ರಾಹುಲ್ ಗಾಂಧಿ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಅನೇಕ ಸೆಷನ್‌ಗಳಲ್ಲಿ ದಾಖಲಿಸಲಾಗಿದೆ. ಇಂದಿನ ವಿಚಾರಣೆ ಸೇರಿ ರಾಹುಲ್ ಗಾಂಧಿ ಇಡಿ ತನಿಖಾಧಿಕಾರಿಗಳೊಂದಿಗೆ ಸುಮಾರು 30 ಗಂಟೆಗಳ ಕಾಲ ಕಳೆದಿದ್ದಾರೆ. ನಾಳೆ ಒಂದು ದಿನ ವಿನಾಯ್ತಿ ನೀಡಿರುವ ಇಡಿ ಜೂನ್ 17ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. 

ರಾಹುಲ್ ಗಾಂಧಿ ಇಡಿ ವಿಚಾರಣೆ ವಿರುದ್ಧ ಕಾಂಗ್ರೆಸ್ ಪ್ರತಿದಿನ ಪ್ರತಿಭಟನೆಗಳನ್ನು ನಡೆಸುತ್ತಿದ್ದು ಇದೊಂದು ದ್ವೇಷದ ರಾಜಕಾರಣ ಎಂದು ಆರೋಪಿಸಿದೆ. ಈ ವಿಚಾರಣೆ ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಕಾಂಗ್ರೆಸ್ ನಿಂದ ಸ್ಥಾಪಿತವಾಗಿದ್ದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೇಲಿನ ಆಪಾದಿತ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿದ್ದು ಯಂಗ್ ಇಂಡಿಯನ್ ಒಡೆತನದಲ್ಲಿತ್ತು.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದತೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಸುತ್ತಿದ್ದು, ದೆಹಲಿ ಪೊಲೀಸರು ಪ್ರತಿಭಟನಾನಿರತ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು ಬುಧವಾರ ವಶಕ್ಕೆ ಪಡೆದಿದ್ದರು.

ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಪ್ರಧಾನ ಕಚೇರಿ ಮತ್ತು ಇಡಿ ಕಚೇರಿಯ ಹೊರಗೆ ಬಂಧಿಸಲಾಯಿತು, ರಾಹುಲ್ ಗಾಂಧಿಯನ್ನು ಬೆಂಬಲಿಸಿ ಪ್ರತಿಭಟನೆಗಳನ್ನು ನಡೆಸಿ, ಘೋಷಣೆಗಳನ್ನು ಕೂಗಿದರು. ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಎಳೆದೊಯ್ದು ಬಂಧನಕ್ಕೊಳಪಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com