ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ರಾಷ್ಟ್ರಪತಿ ಚುನಾವಣೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ.15 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 
ಕೇಂದ್ರ ಚುನಾವಣಾ ಆಯೋಗದ ಕಚೇರಿ
ಕೇಂದ್ರ ಚುನಾವಣಾ ಆಯೋಗದ ಕಚೇರಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ.15 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 

ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜು.18 ಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ವಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಜೂ.15 ರಂದು ದೆಹಲಿಯಲ್ಲಿ ಸಭೆ ನಡೆಸಿವೆ.

ಜೂ.29 ರಂದು ನಾಮಪತ್ರ ಸಲ್ಲಿಸುವುದಕ್ಕೆ ಕೊನೆಯ ದಿನವಾಗಿರಲಿದ್ದು, ಜೂ.30 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜು.2 ನಾಮಪತ್ರ ವಾಪಸ್ ಪಡೆಯುವುದಕ್ಕೆ ಕೊನೆಯ ದಿನವಾಗಿರಲಿದೆ.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜು.24ಕ್ಕೆ ಪೂರ್ಣಗೊಳ್ಳಲಿದ್ದು, ಮತ ಎಣಿಕೆ ಜುಲೈ.21 ರಂದು ನಡೆಯಲಿದೆ.

ರಾಜ್ಯಗಳ ವಿಧಾನಸಭೆಯ ಶಾಸಕರು, ಕೇಂದ್ರಾಡಳಿತ ಪ್ರದೇಶಗಳ ಶಾಸಕರು, ಸಂಸತ್ ಸದಸ್ಯರು ಮತ ಚಲಾಯಿಸುವ ಮೂಲಕ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಲಿದ್ದಾರೆ. ನಾಮನಿರ್ದೇಶನಗೊಂಡ ರಾಜ್ಯಸಭೆಯ ಸದಸ್ಯರು ಹಾಗೂ ವಿಧಾನಪರಿಷತ್ ನ ಸದಸ್ಯರಿಗೆ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುವ ಅವಕಾಶ ಇರುವುದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com