ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ನಕಾರ: ಗೋಪಾಲಕೃಷ್ಣ ಗಾಂಧಿ, ಅಬ್ದುಲ್ಲಾ ಹೆಸರು ಪ್ರಸ್ತಾಪಿಸಿದ ಮಮತಾ!

ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ಮಹಾರಾಷ್ಟ್ರದ ನಾಯಕ ಶರದ್ ಪವಾರ್ ಇಂದು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾನಿನ್ನೂ ಸಕ್ರಿಯ ರಾಜಕೀಯದಲ್ಲಿ ಇದ್ದೇನೆ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ನಕಾರ: ಗೋಪಾಲಕೃಷ್ಣ ಗಾಂಧಿ, ಅಬ್ದುಲ್ಲಾ ಹೆಸರು ಪ್ರಸ್ತಾಪಿಸಿದ ಮಮತಾ!

ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ಮಹಾರಾಷ್ಟ್ರದ ನಾಯಕ ಶರದ್ ಪವಾರ್ ಇಂದು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾನಿನ್ನೂ ಸಕ್ರಿಯ ರಾಜಕೀಯದಲ್ಲಿ ಇದ್ದೇನೆ  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರು 22 ಪಕ್ಷಗಳಿಗೆ ಸಭೆಗೆ ಆಹ್ವಾನ ನೀಡಿದ್ದರು. ಆದರೆ 16 ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ನಾಮನಿರ್ದೇಶನದ ವಿರುದ್ಧ ರಾಷ್ಟ್ರಪತಿ ಅಭ್ಯರ್ಥಿಯನ್ನು ಹೆಸರಿಸಲು ಅವರು ಜೂನ್ 21ರ ಗಡುವು ನಿರ್ಧರಿಸಿದರು. ಇಷ್ಟರೊಳಗೆ ಮಮತಾ ಬ್ಯಾನರ್ಜಿ, ಶರದ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ಅಭ್ಯರ್ಥಿ ಹೆಸರಿನ ಬಗ್ಗೆ ಒಮ್ಮತ ಮೂಡಿಸಲು ವಿವಿಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಶರದ್ ಪವಾರ್ ಅವರು ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಲು ಮಮತಾ ಬ್ಯಾನರ್ಜಿ ಅವರ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಯಾರಿಗೂ ಬೇರೆ ಯಾವುದೇ ಸಲಹೆ ಇರಲಿಲ್ಲ. ಸಭೆಯ ಕೊನೆಯಲ್ಲಿ ದೀದಿ ಗೋಪಾಲ್ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಪ್ರಸ್ತಾಪಿಸಿದರು .

ಶರದ್ ಪವಾರ್ ಅವರಿಗೆ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಶಿವಸೇನೆ ಸೇರಿದಂತೆ ಹಲವು ಪಕ್ಷಗಳ ಬೆಂಬಲವಿತ್ತು. ಶರದ್ ಪವಾರ್ ಒಪ್ಪಿದರೆ, ಎಲ್ಲರೂ ಅವರಿಗೆ ಬೆಂಬಲ ನೀಡುತ್ತಾರೆ. ಆದರೆ ಪವರ್ ಜೀ ಒಪ್ಪುವುದಿಲ್ಲ, ನಾವು ಚರ್ಚಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು.

ಜುಲೈ 18ರಂದು ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಮಮತಾ ಬ್ಯಾನರ್ಜಿಯವರ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದರೆ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಅಕಾಲಿದಳ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ) ಕೂಡ ಕಾಂಗ್ರೆಸ್ ಅಸ್ತಿತ್ವವನ್ನು ಪ್ರತಿಭಟಿಸಿ ಹೊರಗುಳಿದಿವೆ. ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ನಂತರವೇ ಈ ವಿಷಯವನ್ನು ಪರಿಗಣಿಸುವುದಾಗಿ ಎಎಪಿ ಹೇಳಿದೆ.

ಕಾಂಗ್ರೆಸ್ ಜೊತೆ ಯಾವುದೇ ವೇದಿಕೆ ಹಂಚಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಟಿಆರ್‌ಎಸ್ ಹೇಳಿದೆ. ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಮತ್ತು ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂಗೆ ಆಹ್ವಾನ ನೀಡಿರಲಿಲ್ಲ. ನಮ್ಮನ್ನು ಆಹ್ವಾನಿಸಿಲ್ಲ ಮತ್ತು ಕಾಂಗ್ರೆಸ್ ಪಕ್ಷವನ್ನು ಆಹ್ವಾನಿಸಿರುವುದರಿಂದ ನಾವು ಭಾಗವಹಿಸುವುದಿಲ್ಲ ಎಂದು ಓವೈಸಿ ಹೇಳಿದ್ದರು.

ಸಭೆಯನ್ನು ಕರೆದಿದ್ದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ದೇಶದಲ್ಲಿ ನಡೆಯುತ್ತಿರುವ ಬುಲ್ಡೋಜಿಂಗ್ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಒಟ್ಟಾಗಿ ಕುಳಿತುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com