ಭಾರತದಿಂದ ಪೃಥ್ವಿ-2 ಪರಮಾಣು ಸಾಮರ್ಥ್ಯ ಕ್ಷಿಪಣಿ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ.
ಪೃಥ್ವಿ-2 ಕ್ಷಿಪಣಿ
ಪೃಥ್ವಿ-2 ಕ್ಷಿಪಣಿ

ಒಡಿಶಾ: ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. 

ಬುಧವಾರ ರಾತ್ರಿ ಸುಮಾರು 7-30ರ ಸುಮಾರಿನಲ್ಲಿ ಒಡಿಶಾದ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ  ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ-2 ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕ್ಷಿಪಣಿಯು ಅತ್ಯಂತ ಹೆಚ್ಚಿನ ಮಟ್ಟದ ನಿಖರತೆಯೊಂದಿಗೆ ಗುರಿ ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. ಪೃಥ್ವಿ-2 ಕ್ಷಿಪಣಿಗಳ ಪರೀಕ್ಷೆಯು ಯಶಸ್ವಿಯಾಗಿ ಉಡಾವಣೆಯಾಗಿದೆ ಮತ್ತು ಪರೀಕ್ಷೆಯು ಎಲ್ಲಾ ನಿಯತಾಂಕಗಳನ್ನು ಪೂರೈಸಿದೆ ಎಂದು ಡಿಆರ್ ಡಿಒ ತಿಳಿಸಿದೆ. 

350 ಕಿಮೀ ಸ್ಟ್ರೈಕ್ ರೇಂಜ್ ಹೊಂದಿರುವ ನೆಲದಿಂದ ನೆಲಕ್ಕೆ ಜಿಗಿಯುವ ಪರಮಾಣು ಸಾಮರ್ಥ್ಯದ  ಕ್ಷಿಪಣಿ ಪ್ರಯೋಗ ಯಶಸ್ವಿಯಾಗಿ  ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com