ಅಸ್ಸಾಂನಲ್ಲಿ ಭಾರೀ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಸಾವು

ಅಸ್ಸಾಂ ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಭಾರೀ ಪ್ರವಾಹ ಉಂಟಾಗಿದ್ದು, ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 11.09 ಲಕ್ಷ ಜನರನ್ನು ಬಾಧಿಸಿರುವ...
ಅಸ್ಸಾಂನಲ್ಲಿ ಭಾರೀ ಪ್ರವಾಹ
ಅಸ್ಸಾಂನಲ್ಲಿ ಭಾರೀ ಪ್ರವಾಹ

ದಿಸ್ಪುರ್: ಅಸ್ಸಾಂ ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಭಾರೀ ಪ್ರವಾಹ ಉಂಟಾಗಿದ್ದು, ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 11.09 ಲಕ್ಷ ಜನರನ್ನು ಬಾಧಿಸಿರುವ ಪ್ರವಾಹ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ.

ಅಸ್ಸಾಂನ ಹಲವೆಡೆ ಮಾನಸ್, ಪಗ್ಲಾಡಿಯಾ, ಪುತಿಮರಿ, ಕೊಪಿಲಿ, ಗೌರಂಗ್ ಮತ್ತು ಬ್ರಹ್ಮಪುತ್ರ ನದಿಗಳ ನೀರಿನ ಮಟ್ಟವೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 19782.80 ಹೆಕ್ಟೇರ್‌ನಷ್ಟು ಬೆಳೆ ಪ್ರವಾಹದ ನೀರಿನಿಂದ ಆವೃತವಾಗಿದೆ. ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, 1,510 ಹಳ್ಳಿಗಳು ಜಲಾವೃತಗೊಂಡಿವೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

ಅಸ್ಸಾಂನ ರಂಗಿಯಾ ವಿಭಾಗದ ನಲ್ಬರಿ ಮತ್ತು ಘೋಗ್ರಾಪರ್ ನಡುವಿನ ಕಿಮೀ 347/6-8 ನಲ್ಲಿ ನೀರು ನಿಂತಿರುವುದರಿಂದ, ಹಲವಾರು ರೈಲುಗಳ ಸೇವೆ ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಈಶಾನ್ಯ ಗಡಿ ರೈಲ್ವೆಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಈಶಾನ್ಯ ಮುಖ್ಯ ಫ್ರಾಂಟಿಯರ್ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ(CPRO) ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com