ಈ ವರ್ಷಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ: ರಾಜನಾಥ್ ಸಿಂಗ್

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ಜಮ್ಮು: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಮಹಾರಾಜ ಗುಲಾಬ್ ಸಿಂಗ್ ಅವರ ಪಟ್ಟಾಭಿಷೇಕದ 200ನೇ ವರ್ಷಾಚರಣೆಯಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಕಾಶ್ಮೀರದಲ್ಲಿ 47 ಮತ್ತು ಜಮ್ಮು 43 ಸ್ಥಾನಗಳನ್ನು ಹೊಂದಿದೆ ಎಂದು ಹೇಳಿದರು.

ಕೇಂದ್ರಾಡಳಿತ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿರುವ ರಾಜನಾಥ್ ಸಿಂಗ್, ‘ಈ ವರ್ಷಾಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರಾರಂಭಿಸಿದ ಮತ್ತು ಆಗಸ್ಟ್ 31 ರೊಳಗೆ ಕರಡು ಪಟ್ಟಿಯನ್ನು ಸಿದ್ಧಪಡಿಸಿದ ಎರಡು ದಿನಗಳ ನಂತರ ವಿಧಾನಸಭೆ ಚುನಾವಣೆ ನಡೆಸುವ ಸೂಚನೆ ಬಂದಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com