ದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಸೇರಿದ ಹಲವು ಸ್ಥಳಗಳ ಮೇಲೆ ಇ.ಡಿ ದಾಳಿ

ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ಹಲವು ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.
ಸತ್ಯೇಂದ್ರ ಜೈನ್
ಸತ್ಯೇಂದ್ರ ಜೈನ್

ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ಹಲವು ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜೈನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯಲ್ಲಿ ಮೇ 30 ರಂದು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂಲಗಳ ಪ್ರಕಾರ ಇ.ಡಿ ಅಧಿಕಾರಿಗಳು, ಟ್ರಸ್ಟ್‌ ವತಿಯಿಂದ ನಡೆಯುತ್ತಿರುವ ಹೆಸರಾಂತ ಪಬ್ಲಿಕ್‌ ಶಾಲೆಯ ವಿವಿಧ ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಜೈನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರವರ್ತಕರು ಮತ್ತು ನಿರ್ದೇಶಕರನ್ನು ಪ್ರಶ್ನಿಸಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರವಾಗಿ ಇ.ಡಿ ಅಧಿಕಾರಿಗಳು ಇದುವರೆಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

ಸತ್ಯೇಂದ್ರ ಜೈನ್‌, ಅವರ ಪತ್ನಿ ಪೂನಂ ಜೈನ್‌ ಹಾಗೂ ಇತರರ ವಿರುದ್ಧ ಸಿಬಿಐ 2018ರ ಡಿಸೆಂಬರ್‌ 3ರಂದು  ಚಾರ್ಚ್‌ಶೀಟ್‌ ದಾಖಲಿಸಿತ್ತು. ಸತ್ಯೇಂದ್ರ ಜೈನ್‌ ಅವರು ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ವೇಳೆ 2015ರ ಫೆಬ್ರುವರಿ 14ರಿಂದ 2017ರ ಮೇ 31ರ ಅವಧಿಯಲ್ಲಿ, ಘೋಷಿತ ಆದಾಯ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದರು ಎಂದು  ಆರೋಪಿಸಲಾಗಿತ್ತು.

ಸತ್ಯೇಂದ್ರ ಜೈನ್‌ ಹಾಗೂ ಅವರ ಪತ್ನಿ ಪೂನಂ ಜೈನ್‌ ಸೇರಿದಂತೆ ಇತರರ ವಿರುದ್ಧ, ಭ್ರಷ್ಟಾಚಾರ ತಡೆ ಕಾಯ್ದೆ–1988ರ ಸೆಕ್ಷನ್‌ 13 (2) ಮತ್ತು 13 (1) ಅಡಿಯಲ್ಲಿ ಸಿಬಿಐ 2017ರಲ್ಲಿ ದಾಖಲಿಸಿದ್ದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com