ಜೂನ್ 24 ರಿಂದ ಐಎಎಫ್‌ನ 'ಅಗ್ನಿಪಥ್' ನೇಮಕಾತಿ, 'ಸುವರ್ಣ ಅವಕಾಶ' ಕಳೆದುಕೊಳ್ಳಬೇಡಿ: ಕೇಂದ್ರ ಸರ್ಕಾರ

ದೇಶಾದ್ಯಂತ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ 'ಅಗ್ನಿಪಥ' ಸೇನಾ ನೇಮಕಾತಿ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಯು 'ಕೆಲವೇ ದಿನಗಳಲ್ಲಿ' ಪ್ರಾರಂಭವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ವಾಯುಪಡೆ ನೇಮಕಾತಿ
ವಾಯುಪಡೆ ನೇಮಕಾತಿ

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ 'ಅಗ್ನಿಪಥ' ಸೇನಾ ನೇಮಕಾತಿ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಯು 'ಕೆಲವೇ ದಿನಗಳಲ್ಲಿ' ಪ್ರಾರಂಭವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದು, ಸೇನೆಗೆ ಸೇರಲು ಬಯಸುವ ಯುವಕರು ಅದಕ್ಕಾಗಿ ತಯಾರಿ ಪ್ರಾರಂಭಿಸಲು ಮನವಿ ಮಾಡಿದರು.

4 ವರ್ಷಗಳ ಒಪ್ಪಂದದ ನೇಮಕಾತಿ ಯೋಜನೆಯ ವಿರುದ್ಧ ಯುವ ಜನತೆಯ ಕಳವಳವನ್ನು ನಿವಾರಿಸಲು ಸಿಂಗ್ ಪ್ರಯತ್ನಿಸಿದ್ದು ದೇಶದ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವವರಿಗೆ ಇದು 'ಸುವರ್ಣ ಅವಕಾಶ' ಎಂದು ಹೇಳಿದರು.

2022ರಲ್ಲಿ ಯೋಜನೆಯಡಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿರುವ ಸರ್ಕಾರದ ನಿರ್ಧಾರವು ಗಮನಾರ್ಹ ಸಂಖ್ಯೆಯಲ್ಲಿ ಯುವಕರು ಸಶಸ್ತ್ರ ಪಡೆಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಹಲವಾರು ರಾಜ್ಯಗಳಲ್ಲಿ ನಿರಂತರ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ತಲುಪಲು ಸಿಂಗ್ ಟ್ವೀಟರ್ ಮೂಲಕ ಕೇಂದ್ರದ ನಿರ್ಧಾರವನ್ನು ತಿಳಿಸಿದ್ದಾರೆ.

ಸಿಕಂದರಾಬಾದ್‌ನಲ್ಲಿ ಮೂರನೇ ದಿನವೂ ರೈಲುಗಳಿಗೆ ಬೆಂಕಿ ಹಚ್ಚಿ, ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳನ್ನು ತಡೆಯುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದು ಸಿಕಂದರಾಬಾದ್‌ನಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.

'ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಹಲವು ಯುವಕರಿಗೆ ಸೇನೆಗೆ ಸೇರುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ @narendramodi ಅವರ ಸೂಚನೆ ಮೇರೆಗೆ ಕೇಂದ್ರ ಸರ್ಕಾರವು ಅಗ್ನಿವೀರರ ನೇಮಕಾತಿಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ ಎಂದು ಸಿಂಗ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com