ಪ್ರತಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ?: ಶಿವಸೇನೆ

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ ಪ್ರತಿಪಕ್ಷಗಳು ಸಮರ್ಥ ಪ್ರಧಾನಿಯನ್ನು ಹೇಗೆ ನೀಡುತ್ತೀರಿ ಎಂದು ಜನರು ಕೇಳಬಹುದು ಎಂದಿರುವ ಶಿವಸೇನೆ..
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದಿದ್ದರೆ ಪ್ರತಿಪಕ್ಷಗಳು ಸಮರ್ಥ ಪ್ರಧಾನಿಯನ್ನು ಹೇಗೆ ನೀಡುತ್ತೀರಿ ಎಂದು ಜನರು ಕೇಳಬಹುದು ಎಂದಿರುವ ಶಿವಸೇನೆ, ಮುಂದಿನ ರಾಷ್ಟ್ರಪತಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದೆ.

ತನ್ನ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನ ಫಾರೂಕ್ ಅಬ್ದುಲ್ಲಾ ಅವರ ಹೆಸರುಗಳು ರಾಷ್ಟ್ರಪತಿ ಚುನಾವಣೆಯ ಸಮಯದಲ್ಲಿ ಸಾಮಾನ್ಯವಾಗಿ ಕೇಳಿಬರುತ್ತವೆ. ಆದರೆ ಅವುಗಳು ಸ್ಪರ್ಧೆಯ ಯುದ್ಧವನ್ನ ಬಿಗಿಯಾಗಿ ಮಾಡುವ ವ್ಯಕ್ತಿತ್ವ ಅಥವಾ ಗಟ್ಟಿತನವನ್ನು ಹೊಂದಿಲ್ಲ ಎಂದು ಶಿವಸೇನೆ ಹೇಳಿದೆ.

ಮತ್ತೊಂದೆಡೆ ಕೇಂದ್ರ ಸರ್ಕಾರವು ಸಹ ಸಮರ್ಥ ಅಭ್ಯರ್ಥಿಯ ಹೆಸರೊಂದಿಗೆ ಸ್ಪರ್ಧೆಗೆ ಮುಂದೆ ಬಂದಿಲ್ಲ ಎಂದು ಶಿವಸೇನೆ ಹೇಳಿದೆ.  ಐದು ವರ್ಷಗಳ ಹಿಂದೆ ಎರಡು-ಮೂರು ಜನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದರು. ಈ ವರ್ಷವೂ ಅವರು ಇದೇ ರೀತಿ ಮಾಡುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಷ್ಟ್ರಪತಿ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಅವರ ಉತ್ತರಾಧಿಕಾರಿಯನ್ನು ಹುಡುಕುವ ಚುನಾವಣೆ ಜುಲೈ 18 ರಂದು ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಬುಧವಾರದಿಂದ ಪ್ರಾರಂಭವಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಮ್ಮತ ಮೂಡಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೂನ್ 15 ರಂದು ದೆಹಲಿಯಲ್ಲಿ ಕರೆದಿದ್ದ ನಿರ್ಣಾಯಕ ಸಭೆಯಲ್ಲಿ ಕಾಂಗ್ರೆಸ್, ಡಿಎಂಕೆ, ಎನ್‌ಸಿಪಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ 17 ವಿರೋಧ ಪಕ್ಷಗಳು ಭಾಗವಹಿಸಿದ್ದವು.

ಈ ಪಕ್ಷಗಳ ನಾಯಕರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯಾಗುವಂತೆ ಒತ್ತಾಯಿಸಿದರು, ಆದರೆ ಅನುಭವಿ ನಾಯಕ ಪವಾರ್ ಸಭೆಯಲ್ಲಿ ಪ್ರಸ್ತಾಪವನ್ನು ನಿರಾಕರಿಸಿದರು.

ಜೂನ್ 20 ಅಥವಾ ಜೂನ್ 21 ರಂದು ಮುಂಬೈನಲ್ಲಿ ಪವಾರ್ ಅವರು ವಿರೋಧ ಪಕ್ಷಗಳ ಎರಡನೇ ಸಭೆಯನ್ನು ಕರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com