ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ: ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಮೇಲೆ ಹಲ್ಲೆ!

ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸ್ಟೇಟಸ್ ಸಂದೇಶ ಹಾಕಿದ್ದಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ 26 ವರ್ಷದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಣೆ: ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸ್ಟೇಟಸ್ ಸಂದೇಶ ಹಾಕಿದ್ದಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರ ನಗರದಲ್ಲಿ 26 ವರ್ಷದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹಲ್ಲೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಲಾಪುರದ ಎಂಐಡಿಸಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆ ದೇಶದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಇನ್ನು ನೂಪುರ್ ಶರ್ಮಾರನ್ನು ಬೆಂಬಲಿಸಿ ನರೇಂದ್ರ ಶ್ರೀರಾಮ್ ಎಂಬಾತ ಜೂನ್ 11ರಂದು ತಮ್ಮ ವಾಟ್ಸಾಪ್ ಸ್ಟೇಟಸ್ ಸಂದೇಶವನ್ನು ಬದಲಾಯಿಸಿದ್ದರು. ಎಂದು ಅಧಿಕಾರಿ ತಿಳಿಸಿದ್ದಾರೆ.

'ಶ್ರೀರಾಮ್ ಅವರ ಸ್ನೇಹಿತರಾದ ಕೆಲವು ಆರೋಪಿಗಳು ಕೋಪಗೊಂಡು ಆತನನ್ನು ನಿಂದಿಸಿದ್ದರು. ಇದಕ್ಕೆ ಶ್ರೀರಾಮ್ ಕ್ಷಮೆಯಾಚಿಸಿದ್ದು ಸಮಸ್ಯೆ ಪರಿಹರಿಸಿತ್ತು. ಆದರೆ ಜೂನ್ 13ರಂದು, ನಾಲ್ವರು ಪ್ರಮುಖ ಆರೋಪಿಗಳು ಮತ್ತು ಇತರರು ಶ್ರೀರಾಮ್ ಮನೆಯ ಬಳಿ ಬಂದು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ಶ್ರೀರಾಮ್ ಸ್ಥಳದಿಂದ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಿಸಾರ್ ಸಯ್ಯದ್, ನೌಹಿದ್, ವಾಸಿಂ ಪಠಾಣ್, ಅಲ್ತಾಫ್ ಶೇಖ್ ಮತ್ತು ಐದಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com