'ಅಗ್ನಿವೀರ'ರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆ, ಅಸ್ಸಾಂ ರೈಫಲ್ಸ್ ನಲ್ಲಿ ಶೇ.10ರಷ್ಟು ಮೀಸಲಾತಿ: ಗೃಹ ಸಚಿವಾಲಯ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ. 
ಕೇಂದ್ರ ಸಶಸ್ತ್ರ ಮೀಸಲು ಪಡೆ
ಕೇಂದ್ರ ಸಶಸ್ತ್ರ ಮೀಸಲು ಪಡೆ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ. 

ಕೇಂದ್ರ ಸಶಸ್ತ್ರ ಪಡೆಗಳಲ್ಲಿ ಸೈನಿಕರನ್ನು ಅಲ್ಪಾವಧಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ 'ಅಗ್ನಿಪಥ್' ಯೋಜನೆಗೆ ಹಲವು ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆಗಳ ನಡುವೆ ಗೃಹ ಸಚಿವಾಲಯ ಈ ಪ್ರಕಟಣೆ ಹೊರಡಿಸಿದೆ.

ಈ ಯೋಜನೆಯಡಿ ನೇಮಕಗೊಂಡ ಸೈನಿಕರನ್ನು 'ಅಗ್ನಿವೀರ್ಸ್' ಎಂದು ಕರೆಯಲಾಗುತ್ತದೆ. "ಗೃಹ ವ್ಯವಹಾರಗಳ ಸಚಿವಾಲಯವು (MHA) CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇಕಡಾ 10ರಷ್ಟು ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ನಿರ್ಧರಿಸಿದೆ ಎಂದು ಗೃಹ ಸಚಿವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ 'ಅಗ್ನಿವೀರ್ಸ್' ಗೆ ವಯಸ್ಸಿನ ಸಡಿಲಿಕೆಯನ್ನು MHA ಘೋಷಿಸಿತ್ತು. ತನ್ನ ಎರಡನೇ ಟ್ವೀಟ್‌ನಲ್ಲಿ, ಗೃಹ ಸಚಿವರ ಕಚೇರಿಯು, "ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲು MHA ನಿರ್ಧರಿಸಿದೆ. ಇದಲ್ಲದೆ, ಅಗ್ನಿವೀರ್‌ನ ಮೊದಲ ತಂಡಕ್ಕೆ, ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳವರೆಗೆ ವಯಸ್ಸಿನ ಸಡಿಲಿಕೆ ಇರುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com