ಪುಲ್ವಾಮಾ: ಗುಂಡಿಟ್ಟು ಪೊಲೀಸ್ ಅಧಿಕಾರಿಯ ಹತ್ಯೆಗೈದ ಉಗ್ರರು!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಐಆರ್‌ಪಿ 23 ಬಿಎನ್‌ನಲ್ಲಿ ಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಫಾರೂಕ್ ಅಹ್ ಮಿರ್ ಅವರ ಮೃತದೇಹವು ಅವರ ಮನೆಯ ಸಮೀಪವಿರುವ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿನ್ನೆ ಸಂಜೆ ಕೆಲಸದ ನಿಮಿತ್ತ ಗದ್ದೆಗೆ ಅಧಿಕಾರಿ ಹೋಗಿದ್ದರು. ಈ ವೇಳೆ ಉಗ್ರರು ಪಿಸ್ತೂಲ್ ಬಳಸಿ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com