ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರ ರಾಜಧಾನಿಯ ವಿಶೇಷ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.
ಸತ್ಯೇಂದ್ರ ಜೈನ್
ಸತ್ಯೇಂದ್ರ ಜೈನ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರ ರಾಜಧಾನಿಯ ವಿಶೇಷ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೈನ್ ಅವರನ್ನು ಮೇ 30 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಾಮೀನು ಕೋರಿ ಸತ್ಯೇಂದ್ರ ಜೈನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ವಿಶೇಷ ಜಡ್ಜ್(ಪಿಸಿ ಆಕ್ಟ್) ಗೀತಾಂಜಲಿ ಗೋಯೆಲ್ ಅವರು ವಾದ-ಪ್ರತಿವಾದ ಆಲಿಸಿದ ನಂತರ ಜೂನ್ 14 ರಂದು ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಜಾಮೀನು ತಿರಸ್ಕರಿಸಿ ತೀರ್ಪು ನೀಡಿದ್ದಾರೆ.

ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ. ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com