ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತ

ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ(ಬಿಹಾರ): ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.

ದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಪಾಟ್ನಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿತು. ಸ್ಥಳೀಯರು ವಿಮಾನದಲ್ಲಿ ಬೆಂಕಿ ಹತ್ತಿ ಉರಿಯುವುತ್ತಿರುವುದು ಕಂಡ ಕೂಡಲೇ ಜಿಲ್ಲಾಡಳಿತ ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ತಿಳಿಸಿದರು. ಎಲ್ಲಾ 185 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಎಂಜಿನಿಯರಿಂಗ್ ತಂಡ ಪರಿಶೀಲಿಸಿದಾಗ ತಾಂತ್ರಿಕ ದೋಷದಿಂದ ಆಗಿದೆ ಎಂದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.

ಸ್ಪೈಸ್ ಜೆಟ್ ವಿಮಾನ ಪಾಟ್ನಾದಿಂದ ದೆಹಲಿಗೆ ಹೊರಟಿತ್ತು. ಕೂಡಲೇ ಒಂದು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು, ಇಬ್ಬರು ಶಿಶುಗಳು ಸೇರಿದಂತೆ 183 ಮಂದಿ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನ ಸುರಕ್ಷಿತವಾಗಿ ಇಳಿದಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ನಿರ್ದೇಶಕರು ತಿಳಿಸಿದ್ದಾರೆ.

ಪಕ್ಷಿ ಹೊಡೆತದಿಂದ ಗಾಳಿಯಲ್ಲಿ ಒಂದು ಎಂಜಿನ್ ಮುಚ್ಚಲ್ಪಟ್ಟ ಕಾರಣ ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು DGCA ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com