ಮುಂದಿನ ಆರೇಳು ತಿಂಗಳಲ್ಲಿ ನೂಪುರ್ ಶರ್ಮಾ ಬಿಗ್ ಲೀಡರ್- ಓವೈಸಿ

ಪ್ರವಾದಿ ಮೊಹಮ್ಮದ್ ಪೈಂಗರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.
ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ

ಹೈದ್ರಾಬಾದ್: ಪ್ರವಾದಿ ಮೊಹಮ್ಮದ್ ಪೈಂಗರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ದೊಡ್ಡ ಲೀಡರ್ ರೀತಿ ಬಿಂಬಿಸಲಾಗುತ್ತಿದೆ. ದೆಹಲಿಯ ಸಿಎಂ ಸ್ಥಾನಕ್ಕೂ ಸ್ಪರ್ಧಿಯಾಗಬಹುದು ಎಂದು ಅವರು ಹೇಳಿದ್ದಾರೆ.

ನೂಪುರ್ ಶರ್ಮಾ ಅವರನ್ನು ಬಂಧಿಸಬೇಕು ಮತ್ತು ಭಾರತದ ಕಾನೂನಿಗೆ ಅನುಗುಣವಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನದ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ಆರು ಏಳು ತಿಂಗಳಲ್ಲಿ ನೂಪುರ್ ಶರ್ಮಾ ಅವರನ್ನು ದೊಡ್ಡ ಲೀಡರ್ ಆಗಿ ಮಾಡಲಾಗುತ್ತದೆ ಎನ್ನುವುದು ನನಗೆ ಗೊತ್ತು. ನೂಪುರ್ ಶರ್ಮಾ  ದೆಹಲಿ ಸಿಎಂ ಸ್ಥಾನಕ್ಕೂ ಸ್ಪರ್ಧೆ ಮಾಡುವ ಸಾಧ್ಯತೆ ಕೂಡ ಇದೆ ಎಂದಿದ್ದಾರೆ. ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿದ ಓವೈಸಿ, ಅವರನ್ನು ಬಂಧಿಸಿ ತೆಲಂಗಾಣಕ್ಕೆ ಕರೆತರಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಒತ್ತಾಯಿಸಿದ್ದಾರೆ.

“ನೂಪುರ್ ಶರ್ಮಾ ಅವರನ್ನು ಬಿಜೆಪಿ ಕಾಪಾಡುತ್ತಿದೆ. ನಾವು ಪ್ರಧಾನಿಗೆ ಮನವಿ ಮಾಡಿದ್ದೇವೆ. ಆದರೆ ಅವರು ಒಂದೂ ಮಾತು ಆಡುತ್ತಿಲ್ಲ. ಎಐಎಂಐಎಂ ದೂರು ನೀಡಿದೆ. ಎಫ್‌ಐಆರ್ ಕೂಡ ದಾಖಲಾಗಿದೆ. ದೆಹಲಿಗೆ ಪೊಲೀಸರನ್ನು ಕಳುಹಿಸಿ, ಸಹೋದರಿ ನೂಪುರ್ ಶರ್ಮಾ ಅವರನ್ನು ಕರೆತರುವಂತೆ ಈ ರಾಜ್ಯದ ಮುಖ್ಯಮಂತ್ರಿ ಹಾಗೂ ಪೊಲೀಸ್ ಮುಖ್ಯಸ್ಥರನ್ನು ಕೇಳಲು ಬಯಸುತ್ತೇನೆ. ನೀವು ಆಕೆಯನ್ನು ಕರೆತರಬೇಕು ಎಂದು ಓವೈಸಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com