ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿ ಕೋವಿಂದ್ ಭೇಟಿ; ಸಂಸದರೊಂದಿಗೆ ಪೊಲೀಸರ ‘ಕೆಟ್ಟ ವರ್ತನೆ’ ವಿರುದ್ಧ ದೂರು

ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ....
ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಸಂಸದರೊಂದಿಗೆ ಪೊಲೀಸರು ಕೆಟ್ಟದಾಗಿ ನಡೆದುಕೊಂಡ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಮುಖಂಡರು ಅಗ್ನಿಪಥ ಯೋಜನೆ ಬಗ್ಗೆಯೂ ಪ್ರಸ್ತಾಪಿಸಿ ಅದನ್ನು ಹಿಂದಕ್ಕೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಹಿರಿಯ ನಾಯಕರಾದ ಪಿ ಚಿದಂಬರಂ, ಜೈರಾಮ್ ರಮೇಶ್ ಮತ್ತು ಕೆ ಸಿ ವೇಣುಗೋಪಾಲ್ ಇದ್ದರು.

ಇಡಿ ವಿರುದ್ಧದ ತಮ್ಮ ಪ್ರತಿಭಟನೆಯ ವೇಳೆ ಪಕ್ಷದ ಸಂಸದರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ನುಗ್ಗಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ದೆಹಲಿ ಪೊಲೀಸರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com