ಮೋದಿ ಹಿಟ್ಲರ್‌ನನ್ನೂ ಮೀರಿಸಿದ್ದಾರೆ, ಸರ್ವಾಧಿಕಾರಿ ಮಾರ್ಗ ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ: ಕಾಂಗ್ರೆಸ್ ನಾಯಕ

ಪ್ರಧಾನಿ ನರೇಂದ್ರ ಮೋದಿ ಅವರು ಅಡಾಲ್ಫ್ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ. ಅವರು ಜರ್ಮನ್ ಸರ್ವಾಧಿಕಾರಿಯ ಮಾರ್ಗವನ್ನು ಅನುಸರಿಸಿದರೆ “ಹಿಟ್ಲರ್‌ನಂತೆ ಸಾಯುತ್ತಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ...
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಡಾಲ್ಫ್ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ. ಅವರು ಜರ್ಮನ್ ಸರ್ವಾಧಿಕಾರಿಯ ಮಾರ್ಗವನ್ನು ಅನುಸರಿಸಿದರೆ “ಹಿಟ್ಲರ್‌ನಂತೆ ಸಾಯುತ್ತಾರೆ” ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಸುಬೋಧ್ ಕಾಂತ್ ಸಹಾಯ್ ಅವರು ಸೋಮವಾರ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಆದರೆ ಕೇಂದ್ರದ ಅಗ್ನಿಪಥ ಯೋಜನೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ ಪಕ್ಷದ ಸತ್ಯಾಗ್ರಹ ಪ್ರತಿಭಟನೆಯಲ್ಲಿ ನೀಡಿದ  ಸುಬೋಧ್ ಕಾಂತ್ ಸಹಾಯ್ ಹೇಳಿಕೆಯಿಂದ ದೂರ ಉಳಿದಿರುವ ಕಾಂಗ್ರೆಸ್, ಪ್ರಧಾನಿ ವಿರುದ್ಧ ಯಾವುದೇ ಅಸಭ್ಯ ಟೀಕೆಗಳನ್ನು ಅನುಮೋದಿಸುವುದಿಲ್ಲ ಎಂದು ಹೇಳಿದೆ.

ಸತ್ಯಾಗ್ರಹ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸುಬೋಧ್ ಕಾಂತ್ ಸಹಾಯ್, ಬಿಜೆಪಿ ಆಡಳಿತವನ್ನು “ಲೂಟಿಕೋರರ” ಸರ್ಕಾರ ಎಂದು ಕರೆದರು. ಇದು ಲೂಟಿಕೋರರ ಸರ್ಕಾರವಾಗಿದ್ದು, ಮೋದಿ ರಿಂಗ್ ಮಾಸ್ಟರ್ ನಂತೆ ವರ್ತಿಸುತ್ತಿದ್ದಾರೆ. ಸರ್ವಾಧಿಕಾರಿಯ ಪಾತ್ರವನ್ನು ವಹಿಸಿಕೊಂಡಿದ್ದಾರೆ ಎಂದರು.

ಅವರು ಹಿಟ್ಲರ್‌ನನ್ನೂ ಮೀರಿಸಿದ್ದಾರೆ ಎಂದು ನನಗೆ ಅನಿಸುತ್ತದೆ. ಹಿಟ್ಲರ್ ಸೇನೆಯೊಳಗೇ ‘ಖಾಕಿ’ ಎಂಬ ಸಂಘಟನೆಯನ್ನೂ ಹುಟ್ಟು ಹಾಕಿದ್ದ. ಮೋದಿ ಹಿಟ್ಲರ್‌ನ ಹಾದಿ ಹಿಡಿದರೆ ಹಿಟ್ಲರ್‌ನಂತೆ ಸಾಯುತ್ತಾರೆ, ಇದನ್ನು ನೆನಪಿಟ್ಟುಕೊಳ್ಳಿ ಎಂದರು.

ಮೋದಿ ಸರ್ಕಾರದ ಸರ್ವಾಧಿಕಾರಿ ಮನಸ್ಥಿತಿ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಡಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಪ್ರಧಾನಿ ವಿರುದ್ಧ ಯಾವುದೇ ಅಸಭ್ಯ ಟೀಕೆಗಳನ್ನು ಅನುಮೋದಿಸುವುದಿಲ್ಲ . ಗಾಂಧಿಯವರ ತತ್ವಗಳ ಪ್ರಕಾರ ಪಕ್ಷದ ಹೋರಾಟ ಮುಂದುವರಿಯುತ್ತದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಅಗ್ನಿಪಥ್ ಯೋಜನೆಯು ಯುವ ವಿರೋಧಿ ಮತ್ತು ಸೇನೆಯನ್ನು ನಾಶ ಮಾಡುತ್ತದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com