ಒಂದೇ ಮನೆಯಲ್ಲಿ 9 ಮಂದಿ ಶವ ಪತ್ತೆ; ಆತ್ಮಹತ್ಯೆ ಶಂಕೆ!
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ ಒಂದೇ ಕುಟುಂಬದ ಒಂಬತ್ತು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
Published: 20th June 2022 04:38 PM | Last Updated: 20th June 2022 05:24 PM | A+A A-

ಪ್ರತ್ಯಕ್ಷ ದೃಶ್ಯ
ಸಾಂಗ್ಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ ಒಂದೇ ಕುಟುಂಬದ ಒಂಬತ್ತು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಹೈಸಾಲ್ನಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಮೂರು ಶವಗಳು ಮನೆಯ ಒಂದೇ ಸ್ಥಳದಲ್ಲಿ ಕಂಡುಬಂದರೆ, ಆರು ಮೃತದೇಹಗಳು ಮನೆಯ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ ಎಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ಹೇಳಿದ್ದಾರೆ.
ಇದು ಆತ್ಮಹತ್ಯೆಯ ಪ್ರಕರಣ ಎಂದು ಶಂಕಿಸಲಾಗಿದೆ. ಆದರೆ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೃತರೆಲ್ಲರೂ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾರೆ ಎಂದು ಶಂಕಿಸಲಾಗಿದ್ದು ಸದ್ಯ ತನಿಖೆ ನಡೆಯತ್ತಿದೆ.