ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂನ್ 23ರಂದು ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವಾರದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವಾರದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಜೂನ್ 12 ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೆಲ ದಿನಗಳ ನಂತರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಶಿಲೀಂದ್ರ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಸದ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, ಅಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನಾಲ್ಕು ಬಾರಿ ವಿಚಾರಣೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com