ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಢ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ. ಸ್ಮತಿ ಇರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇದು ಎರಡನೇ ಬಾರಿ. 2020ರಲ್ಲಿಯೂ ಸೋಂಕು ತಗುಲಿತ್ತು.
Published: 20th June 2022 10:02 AM | Last Updated: 20th June 2022 02:45 PM | A+A A-

ಸ್ಮೃತಿ ಇರಾನಿ
ನವದೆಹಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಭಾನುವಾರ ಕೋವಿಡ್–19 ದೃಢಪಟ್ಟಿದೆ. ಸ್ಮತಿ ಇರಾನಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇದು ಎರಡನೇ ಬಾರಿ. 2020ರಲ್ಲಿಯೂ ಸೋಂಕು ತಗುಲಿತ್ತು.
ಈ ಕುರಿತು ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ. ‘ರಾಜೇಂದ್ರ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದಿದ್ದಕ್ಕಾಗಿ ನಾನು ನಾಗರಿಕರಲ್ಲಿ ಕ್ಷಮೆ ಯಾಚಿಸುತ್ತೇನೆ.
ಕೋವಿಡ್–19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾಗೆ ಮತ ನೀಡಿ ಪಕ್ಷವನ್ನು ಗೆಲ್ಲಿಸುವಂತೆ ರಾಜೇಂದ್ರ ನಗರದ ಜನತೆಯಲ್ಲಿ ಮನವಿ ಮಾಡುತ್ತಿದ್ದೇನೆ’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.