ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಉಗುಳಿದ ನಾಯಕಿ

ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಆ ಪಕ್ಷದ ನಾಯಕಿಯೊಬ್ಬರು ಪೊಲೀಸರ ಮೇಲೆಯೇ ಉಗುಳಿದ ಪ್ರಸಂಗ ನಡೆದಿದೆ.
ಪೊಲೀಸರ ಮೇಲೆ ಉಗುಳಿದ ಕಾಂಗ್ರೆಸ್ ನಾಯಕಿ
ಪೊಲೀಸರ ಮೇಲೆ ಉಗುಳಿದ ಕಾಂಗ್ರೆಸ್ ನಾಯಕಿ

ನವದೆಹಲಿ: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಆ ಪಕ್ಷದ ನಾಯಕಿಯೊಬ್ಬರು ಪೊಲೀಸರ ಮೇಲೆಯೇ ಉಗುಳಿದ ಪ್ರಸಂಗ ನಡೆದಿದೆ.

ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸುವ ವೇಳೆ ದೆಹಲಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಪೊಲೀಸರ ಮೇಲೆ ಉಗುಳಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ವಾಹನ ಹತ್ತಿಸಿದ ಬಳಿಕ ವಾಹನದ ಬಾಗಿಲು ಮುಚ್ಚುವುದಕ್ಕೂ ಮುನ್ನ ಪೊಲೀಸರ ಜೊತೆ ವಾಗ್ವಾದ ನಡೆಸಿರುವ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು, ಅಧಿಕಾರಿಗಳತ್ತ ಉಗುಳಿರುವ ದೃಶ್ಯ ವಿಡಿಯೊದಲ್ಲಿದೆ.

ಈ ಮಧ್ಯೆ, ಇಂದು ಐದನೇ ದಿನ ರಾಹುಲ್ ಗಾಂಧಿ ಇ.ಡಿ ವಿಚಾರಣೆಗೆ ಹಾಜರಾಗಿದ್ದರು. ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಜಂತರ್‌ ಮಂತರ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದ ನಾಯಕರನ್ನು ಪೊಲೀಸರು ತಡೆದರು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com