ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ಆರಂಭಗೊಂಡಿದ್ದು, ಸೋಪೋರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.
Published: 21st June 2022 08:41 AM | Last Updated: 21st June 2022 12:53 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪುಲ್ವಾಮಾದ ತುಜ್ಜನ್ ಪ್ರದೇಶ ಮತ್ತು ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ಆರಂಭಗೊಂಡಿದ್ದು, ಸೋಪೋರ್‌ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.
ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದ ಕುಪ್ವಾರ, ಪುಲ್ವಾಮ ಜಿಲ್ಲೆಗಳಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ
ಸೋಪೋರ್‌ನ ತುಲಿಬಲ್ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಮಾರ್ಪಡಿಸಲಾಗಿದ್ದು, ಬಳಿಕ ಭದ್ರತಾ ಪಡೆಗಳು ಉಗ್ರರಿಗೆ ಪ್ರತ್ಯುತ್ತರ ನೀಡುತ್ತಿದ್ದಾರೆ. ಎರಡೂ ಸ್ಥಳಗಳಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ತಿಳಿದುಬಂದಿದೆ.