ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ

ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿಂದು ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ದುರ್ಬಲವಾಗಿರುವಾಗ ಮತ್ತು ಆರ್ಥಿಕತೆ ದುರ್ಬಲವಾಗಿರುವಾಗ ಸರ್ಕಾರ ಪತನಗೊಳ್ಳುವಂತೆ ಮಾಡುತ್ತಿದ್ದಾರೆ. ಎಲ್ಲವೂ ತಮಾಷೆ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೊದಲಿನಿಂದಲೂ ಮಹಾರಾಷ್ಟ್ರವನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸುತ್ತಿದ್ದರು. ಇದೀಗ ಅದು ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದುರಹಂಕಾರದಿಂದ ನಡೆಯದೆ, ಸಂವಿಧಾನದ ಪ್ರಕಾರ ದೇಶವನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com