ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ನಿತೀಶ್ ಕುಮಾರ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುತ್ತಿದ್ದು, ಅವರ ಉಮೇದುವಾರಿಕೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ ಸ್ವಾಗತಿಸಿದ್ದಾರೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುತ್ತಿದ್ದು, ಅವರ ಉಮೇದುವಾರಿಕೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ ಸ್ವಾಗತಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್‌ ಮಾಜಿ ರಾಜ್ಯಪಾಲೆ ಮುರ್ಮು ಅವರನ್ನು ನಾಮನಿರ್ದೇಶನ ಮಾಡುವ ನಿರ್ಧಾರದ ಬಗ್ಗೆ ತಮಗೆ ತಿಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕರೆ ಮಾಡಿದ್ದಾರು ಎಂದು ನಿತೀಶ್ ಕುಮಾರ್ ಟ್ವೀಟ್‌ ಮಾಡಿದ್ದಾರೆ.

“ಭಾರತದ ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆ ಬಗ್ಗೆ ನಾವು ಸಂತೋಷ ವ್ಯಕ್ತಪಡಿಸುತ್ತೇವೆ. ಆಕೆ ಬುಡಕಟ್ಟು ಜನಾಂಗದ ಮಹಿಳೆಯಾಗಿದ್ದು, ಬುಡಕಟ್ಟು ಮಹಿಳೆಯೊಬ್ಬರು ದೇಶದ ಅತ್ಯುನ್ನತ ಸ್ಥಾನಕ್ಕೆ ಅಭ್ಯರ್ಥಿಯಾಗಿರುವುದು ಸಂತಸದ ವಿಚಾರ. ಅವರು ಒಡಿಶಾದಲ್ಲಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದರು ಮತ್ತು ಜಾರ್ಖಂಡ್ ರಾಜ್ಯಪಾಲರಾಗಿ ಅವರ ಪಾತ್ರ ಶ್ಲಾಘನೀಯವಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಕೂಡ ಈ ವಿಚಾರದಲ್ಲಿ ತಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ತಮ್ಮ ಪಕ್ಷ ಯಾವಾಗಲೂ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ. ನಾವು ಮುರ್ಮು ಅವರವನ್ನು ಸ್ವಾಗತಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ. ಅವರ ಗೆಲುವು ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.

2012ರಲ್ಲಿ ಜೆಡಿಯು ಎನ್‌ಡಿಎ ಭಾಗವಾಗಿದ್ದರೂ ಯುಪಿಎ ಅಭ್ಯರ್ಥಿ ಪ್ರಣಬ್ ಮುಖರ್ಜಿ ಪರವಾಗಿ ಮತ ಹಾಕಿತ್ತು. ಅಂತೆಯೇ, 2017 ರಲ್ಲಿ, ಜೆಡಿ-ಯು ರಾಜ್ಯದಲ್ಲಿ ಆರ್‌ಜೆಡಿ ನೇತೃತ್ವದ ಮಹಾಮೈತ್ರಿಕೂಟದ ಭಾಗವಾಗಿದ್ದರೂ ಸಹ ನಿತೀಶ್ ಅವರ ಪಕ್ಷವು ಎನ್‌ಡಿಎ ಅಭ್ಯರ್ಥಿ ಮತ್ತು ಬಿಹಾರದ ಮಾಜಿ ಗವರ್ನರ್ ರಾಮ್ ನಾಥ್ ಕೋವಿಂದ್ ಅವರ ಪರವಾಗಿ ಮತ ಹಾಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com