10ನೇ ತರಗತಿ ಪೂರಕ ಪರೀಕ್ಷೆಗೆ ಶುಲ್ಕ ವಿನಾಯ್ತಿ, ಪಾವತಿಸಿದ ಶುಲ್ಕವನ್ನು ಮರುಪಾವತಿಸಲು ಆಂಧ್ರ ಸರ್ಕಾರ ನಿರ್ಧಾರ

ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯವಾಡ: ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಸುಧಾರಿತ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಡೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಕಚೇರಿ ಅನುಮೋದನೆ ನೀಡಿದೆ. 

ಯಾವುದೇ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕವನ್ನು ಪಡೆಯುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲಾಗುವುದು ಎಂದು ಪರೀಕ್ಷಾಂಗ ನಿರ್ದೇಶಕ ಡಿ.ದೇವಾನಂದ ರೆಡ್ಡಿ ತಿಳಿಸಿದ್ದಾರೆ. ಪ್ರಕಟಣೆಯ ಮೊದಲು ಪರೀಕ್ಷಾ ಶುಲ್ಕವನ್ನು ಪಾವತಿಸಿದವರಿಗೆ ಹಣವನ್ನು ಮರುಪಾವತಿಸಲಾಗುತ್ತದೆ.

ಸುಮಾರು ಶೇಕಡಾ 33ರಷ್ಟು ವಿದ್ಯಾರ್ಥಿಗಳು SSC 2022ನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ. ಹತ್ತನೇ ತರಗತಿ ತೇರ್ಗಡೆ ಪ್ರಮಾಣವು 2019 ರಲ್ಲಿ ಶೇಕಡಾ 94.88 ರಿಂದ 2022 ರಲ್ಲಿ ಶೇಕಡಾ 67.26 ಕ್ಕೆ ಗಕುಸಿತವನ್ನು ಕಂಡಿದೆ. ಪರೀಕ್ಷೆಗಳಿಗೆ ಹಾಜರಾದ 6,15,908 ವಿದ್ಯಾರ್ಥಿಗಳಲ್ಲಿ ಒಟ್ಟು 4,14,281 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಅಡ್ವಾನ್ಸ್ಡ್ ಸಪ್ಲಿಮೆಂಟರಿ ಪರೀಕ್ಷೆಯನ್ನು ಒಂದು ತಿಂಗಳಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ. ಅಡ್ವಾನ್ಸ್ಡ್ ಸಪ್ಲಿಮೆಂಟರಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಾಮಾನ್ಯ ಪಾಸ್ ಎಂದು ಪರಿಗಣಿಸಲಾಗುತ್ತದೆ. 

ಸರ್ಕಾರ, ಪೂರಕ ಪರೀಕ್ಷೆಗಳಿಗೆ ಶುಲ್ಕ ವಿನಾಯಿತಿ ನೀಡಿರುವುದನ್ನು ಪೋಷಕರು ಮತ್ತು ವಿದ್ಯಾರ್ಥಿಗಳು ಸ್ವಾಗತಿಸಿದ್ದಾರೆ.

ಶಾಲೆ ಪುನಾರಂಭ ಮುಂದೂಡಿಕೆ: ಜುಲೈ 4 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಿಂದಾಗಿ ಶಾಲೆಗಳ ಪುನರಾರಂಭವನ್ನು ಒಂದು ದಿನ ಮುಂದೂಡಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಹಿಂದಿನ ಆದೇಶದ ಪ್ರಕಾರ, ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಜುಲೈ 4 ರಂದು ತೆರೆಯಲು ನಿರ್ಧರಿಸಲಾಗಿತ್ತು. . ಜುಲೈ 4 ರಂದು ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಾರ್ಯಕ್ರಮದಿಂದಾಗಿ ಜುಲೈ 5 ರಂದು ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಶಾಲಾ ಶಿಕ್ಷಣ ಆಯುಕ್ತ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com