ಕಾಂಗ್ರೆಸ್ ಅನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಗೊತ್ತಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.
Published: 22nd June 2022 04:24 PM | Last Updated: 22nd June 2022 04:40 PM | A+A A-

ರಾಹುಲ್ ಗಾಂಧಿ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.
ಇಡಿ ಮತ್ತು ಅಂತಹ ಸಂಸ್ಥೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ, ನನ್ನನ್ನು ವಿಚಾರಣೆ ನಡೆಸಿದ ಅಧಿಕಾರಿಗಳು ಸಹ ಕಾಂಗ್ರೆಸ್ ಪಕ್ಷದ ನಾಯಕನನ್ನು ಹೆದರಿಸಲು ಮತ್ತು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅರ್ಥಮಾಡಿಕೊಂಡರು ಎಂದು ಬುಧವಾರ ಎಐಸಿಸಿ ಪ್ರಧಾನ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಹೇಳಿದರು.
ಇದನ್ನೂ ಓದಿ: ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ
ಸಶಸ್ತ್ರ ಪಡೆಗಳಲ್ಲಿ ಅಲ್ಪಾವಧಿಯ ನೇಮಕಾತಿಗಾಗಿ ಕೇಂದ್ರದ ಹೊಸ ಅಗ್ನಿಪಥ್ ಯೋಜನೆಯನ್ನು ಟೀಕಿಸಿದ ಅವರು, ನಾವು ಸೈನ್ಯವನ್ನು ಬಲಪಡಿಸಬೇಕು, ಆದರೆ ಈ ಸರ್ಕಾರವು ಅದನ್ನು ದುರ್ಬಲಗೊಳಿಸುತ್ತಿದೆ; ಇದು ಯುದ್ಧದ ಸಮಯದಲ್ಲಿ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದರು.
ಮಂಗಳವಾರ, ಮತ್ತೊಂದು ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಾಂಧಿ ಅವರನ್ನು ಐದನೇ ಬಾರಿಗೆ ಕರೆಸಿದ್ದರು.