ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.
Published: 22nd June 2022 04:00 PM | Last Updated: 22nd June 2022 04:00 PM | A+A A-

ಸೋನಿಯಾ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.
ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ. ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯ
ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಬಳಿಕ
ಜೂನ್ 12 ರಂದು ಉಸಿರಾಟದ ತೊಂದರೆಯಿಂದ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.