ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ

ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಧವ್ ಠಾಕ್ರೆಯವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಿಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಪುಟ ಸಭೆ ಆರಂಭಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.

ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್‌ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ 10ಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ನಂತರ 26ಕ್ಕೂ ಹೆಚ್ಚು ಶಾಸಕರು ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com