ನವದೆಹಲಿ: ಭ್ರಷ್ಟಾಚಾರ ಆರೋಪ, ಕೇಜ್ರಿವಾಲ್ ಕಚೇರಿಯ ಉಪ ಕಾರ್ಯದರ್ಶಿ ಅಮಾನತು
ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಹಾಗೂ ಇಬ್ಬರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗಳನ್ನು ಅಮಾನತುಗೊಳಿಸಲಾಗಿದೆ.
Published: 23rd June 2022 12:32 PM | Last Updated: 23rd June 2022 12:32 PM | A+A A-

ದೆಹಲಿ ಲೆಫ್ಟಿನೆಂಟ್ ಗೌವರ್ನರ್
ನವದೆಹಲಿ: ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಹಾಗೂ ಇಬ್ಬರು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗಳನ್ನು ಅಮಾನತುಗೊಳಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಹರ್ಷಿತ್ ಜೈನ್ ಮತ್ತು ದೇವೇಂದ್ರ ಶರ್ಮಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕಾಶ್ ಚಂದ್ರ ಠಾಕೂರ್ ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ವಸಂತ ವಿಹಾರ್ ಎಸ್ ಡಿಎಂ ಹರ್ಷಿತ್ ಜೈನ್ ಮತ್ತು ವಿವೇಕ್ ವಿಹಾರ್ ಎಸ್ ಡಿಎಂ ದೇವೇಂದ್ರ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಲ್ಕಾಜಿ ವಿಸ್ತರಣೆಯಲ್ಲಿ ಇಡಬ್ಲ್ಯೂಎಸ್ ಫ್ಲಾಟ್ ಗಳ ನಿರ್ಮಾಣದಲ್ಲಿ ಲೋಪ ತಿಳಿದ ನಂತರ ಲೆಫ್ಟಿನೆಂಟ್ ಗೌವರ್ನರ್ ಸೋಮವಾರ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಇಬ್ಬರು ಸಹಾಯಕ ಎಂಜಿನಿಯರ್ ಗಳನ್ನು ಅಮಾನತುಗೊಳಿಸಿದ್ದಾರೆ.