ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ, ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
Published: 23rd June 2022 04:06 PM | Last Updated: 23rd June 2022 04:06 PM | A+A A-

ಸೋನಿಯಾ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇತ್ತೀಚಿಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸೋನಿಯಾ ಗಾಂಧಿ ಅವರು ಬುಧವಾರ ತಮ್ಮ ಅನಾರೋಗ್ಯದ ಬಗ್ಗೆ ಇಡಿಗೆ ಪತ್ರ ಬರೆದಿದ್ದರು ಮತ್ತು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಸೋನಿಯಾ ಗಾಂಧಿ ಮನವಿಗೆ ತನಿಖಾ ಸಂಸ್ಥೆ ಒಪ್ಪಿಗೆ ಸೂಚಿಸಿದೆ.
ಇದನ್ನು ಓದಿ: ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ
"ಸೋನಿಯಾ ಗಾಂಧಿ ಅವರು ಕೋವಿಡ್ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದು, ವಿಚಾರಣೆಗೆ ಫಿಟ್ ಆಗಿಲ್ಲ" ಎಂದು ಮೂಲಗಳು ತಿಳಿಸಿವೆ.
ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಒಂದು ವಾರದ ನಂತರ ಸೋಮವಾರ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಜೂನ್ 12 ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೆಲ ದಿನಗಳ ನಂತರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಶಿಲೀಂದ್ರ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಸದ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.