ಕೋವಿಡ್-19: ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣ, 10,972 ಮಂದಿ ಚೇತರಿಕೆ 38 ಮಂದಿ ಸಾವು
ದೇಶದಲ್ಲಿ ಮತ್ತೆ ಕೊರೋನಾ ಸೋಂಕು ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣ ಪತ್ತೆಯಾಗಿದ್ದು 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Published: 23rd June 2022 10:42 AM | Last Updated: 23rd June 2022 10:44 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಸೋಂಕು ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣ ಪತ್ತೆಯಾಗಿದ್ದು 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ 10,972 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೆ ಗುಣಮುಖರಾದವರ ಸಂಖ್ಯೆ 4,27,36,027ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣಗಳು ವರದಿಯಾಗಿವೆ.
ಪ್ರಸ್ತುತ ದೇಶದಲ್ಲಿ 83 ಸಾವಿರದ 990 ಮಂದಿ ಸಕ್ರಿಯ ಕೋವಿಡ್ ಸೋಂಕಿತರಿದ್ದು, ಪ್ರತಿದಿನ ಸರಾಸರಿ ಶೇಕಡಾ 2.03ರಷ್ಟು ಪಾಸಿಟಿವ್ ದರವಿದೆ.
ಇದುವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ 52 ಲಕ್ಷದ 4 ಸಾವಿರದ 903 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟಾರೆ 196 ಕೋಟಿಯ 62 ಲಕ್ಷ ಡೋಸ್ ಕೋವಿಡ್ ಲಸಿಕೆಯನ್ನು ದೇಶದ ನಾಗರಿಕರಿಗೆ ನೀಡಲಾಗಿದೆ.
ಇದನ್ನೂ ಓದಿ: ಕೋವಿಡ್-19: ಭಾರತದಲ್ಲಿ 12,249 ಹೊಸ ಪ್ರಕರಣ, 9,862 ಚೇತರಿಕೆ, 13 ಮಂದಿ ಸಾವು
ಕೊರೋನಾ ಸೋಂಕು ಬಂದ ಮೇಲೆ ದೇಶದಲ್ಲಿ 85.94 ಕೋಟಿ ಪರೀಕ್ಷೆಗಳನ್ನು ಮಾಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ 6,56,410 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.