ಉತ್ತರ ಪ್ರದೇಶ: ನೈತಿಕ ಪೊಲೀಸ್ ಗಿರಿ, ಸರಯೂ ನದಿಯಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಪತಿಗೆ ಥಳಿತ! ವಿಡಿಯೋ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಪತಿಯನ್ನು ನೈತಿಕ ಪೊಲೀಸ್ ಗಿರಿಯ ನಿರ್ದೇಶನದಂತೆ ಗುಂಪೊಂದು ಥಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Published: 23rd June 2022 11:59 AM | Last Updated: 23rd June 2022 12:13 PM | A+A A-

ಹಲ್ಲೆಗೊಳಗಾದ ವ್ಯಕ್ತಿ
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಪತಿಯನ್ನು ನೈತಿಕ ಪೊಲೀಸ್ ಗಿರಿಯ ನಿರ್ದೇಶನದಂತೆ ಗುಂಪೊಂದು ಥಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಮಂಗಳವಾರ ರಾಮ್ ಕಿ ಪೌದಿ ಘಾಟ್ ಬಳಿ ಈ ಘಟನೆ ನಡೆದಿರುವುದಾಗಿ ಕೆಲ ಜನರು ಹೇಳುತ್ತಿದ್ದರೂ ಈ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಇಲ್ಲಿಯವರೆಗೂ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.
अयोध्या: सरयू में स्नान के दौरान एक आदमी ने अपनी पत्नी को किस कर लिया. फिर आज के रामभक्तों ने क्या किया, देखें: pic.twitter.com/hG0Y4X3wvO
— Suneet Singh (@Suneet30singh) June 22, 2022
ಆದಾಗ್ಯೂ, ಈ ವಿಚಾರದ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ದಂಪತಿ ಹಾಗೂ ಅವರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕರ ಶೈಲೇಶ್ ಪಾಂಡೆ ಹೇಳಿದ್ದಾರೆ.