ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆ, ಸಿಎಂ ಚೌಹಾಣ್ ಡ್ಯಾನ್ಸ್, ವಿಡಿಯೋ!

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ನೃತ್ಯದ ಚಿತ್ರ
ಶಿವರಾಜ್ ಸಿಂಗ್ ಚೌಹಾಣ್ ನೃತ್ಯದ ಚಿತ್ರ

ಭೋಪಾಲ್: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.

ಈ ವಿಡಿಯೋವನ್ನು ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈ ಸಂತಸದ ಕ್ಷಣಗಳನ್ನು ಬುಡಕಟ್ಟು ಸಹೋದರ- ಸಹೋದರಿಯರೊಂದಿಗೆ ಜಾನಪದ ನೃತ್ಯ ಮಾಡುವ ಮೂಲಕ ಅಭಿನಂದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಅನೇಕ ಮಂದಿ ಮೆಚ್ಚುಗೆ ಸೂಚಿಸಿದ್ದಾರೆ.

ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com