ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಟ್ವೀಟ್, ರಾಮ್ ಗೋಪಾಲ್ ವರ್ಮ ವಿರುದ್ಧ ದೂರು, ನಿರ್ದೇಶಕರ ಸ್ಪಷ್ಟನೆಯೇನು?

ಹಲವು ಬಾರಿ ತಮ್ಮ ವಿವಾದಾತ್ಮಕ ಹೇಳಿಕೆಗಳು ಮತ್ತು ಟ್ವೀಟ್ ಗಳಿಂದ ಸುದ್ದಿಯಾಗುತ್ತಾರೆ ಬಹುಭಾಷಾ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮ. ಈ ಬಾರಿ ಎನ್ ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ಮಾಡಿದ್ದ ಟ್ವೀಟ್ ವಿವಾದ ಸೃಷ್ಟಿಸಿ ದೂರು ಕೂಡ ದಾಖಲಾಗಿದೆ.
ರಾಮ್ ಗೋಪಾಲ್ ವರ್ಮ, ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು(ಸಂಗ್ರಹ ಚಿತ್ರ)
ರಾಮ್ ಗೋಪಾಲ್ ವರ್ಮ, ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು(ಸಂಗ್ರಹ ಚಿತ್ರ)

ಮುಂಬೈ: ಹಲವು ಬಾರಿ ತಮ್ಮ ವಿವಾದಾತ್ಮಕ ಹೇಳಿಕೆಗಳು ಮತ್ತು ಟ್ವೀಟ್ ಗಳಿಂದ ಸುದ್ದಿಯಾಗುತ್ತಾರೆ ಬಹುಭಾಷಾ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮ (Ram Gopal Verma). ಈ ಬಾರಿ ಎನ್ ಡಿಎಯ ರಾಷ್ಟ್ರಪತಿ ಅಭ್ಯರ್ಥಿ (President candidate) ದ್ರೌಪದಿ ಮುರ್ಮು (Draupadi Murmu) ಅವರ ಬಗ್ಗೆ ಮಾಡಿದ್ದ ಟ್ವೀಟ್ ವಿವಾದ ಸೃಷ್ಟಿಸಿ ದೂರು ಕೂಡ ದಾಖಲಾಗಿದೆ.

ಎನ್ ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಹೆಸರು ಘೋಷಣೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ವರ್ಮ, ದ್ರೌಪದಿಯವರು ರಾಷ್ಟ್ರಪತಿಯಾದರೆ ಪಾಂಡವರು ಮತ್ತು ಕೌರವರು ಯಾರು ಎಂದು ಕೇಳಿದ್ದರು. 

ಈ ಟ್ವೀಟ್ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ನು ಬಿಜೆಪಿ ನಾಯಕರಾದ ಗುಡೂರು ನಾರಾಯಣ ರೆಡ್ಡಿ ಮತ್ತು ಟಿ ನಂದೇಶ್ವರ್ ಗೌಡ ಒಂದು ಹೆಜ್ಜೆ ಮುಂದೆ ಹೋಗಿ ಹೈದರಾಬಾದ್ ನ ಅಬಿಡ್ಜ್ ಪೊಲೀಸ್ ಠಾಣೆಯಲ್ಲಿ ವರ್ಮ ವಿರುದ್ಧ ದೂರು ಕೂಡ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ತಮ್ಮ ಟ್ವೀಟ್ ವಿವಾದವಾಗಿ ದೂರು ದಾಖಲಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ರಾಮ್ ಗೋಪಾಲ್ ವರ್ಮ, ಇದನ್ನು ನಾನು ಕೇವಲ ವ್ಯಂಗ್ಯವಾಗಿ ಹೇಳಿದೆಯಷ್ಟೆ, ಅದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ. ಮಹಾಭಾರತದಲ್ಲಿ ದ್ರೌಪದಿ ನನ್ನ ಅಚ್ಚುಮೆಚ್ಚಿನ ಪಾತ್ರವಾಗಿದ್ದು, ಈಗ ರಾಷ್ಟ್ರಪತಿ ಅಭ್ಯರ್ಥಿಯಾಗಿರುವವರ ಹೆಸರು ಅಪರೂಪದ್ದಾಗಿರುವುದರಿಂದ ಅವರ ಹೆಸರನ್ನು ಮಹಾಭಾರತದ ದ್ರೌಪದಿ ಪಾತ್ರಕ್ಕೆ ಹೋಲಿಸಿ ಟ್ವೀಟ್ ಮಾಡಿದೆ ಅಷ್ಟೆ, ಅದು ಬಿಟ್ಟರೆ ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com