ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ

ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ.
ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್
ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್

ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ.

ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ಟಾ ಸೆಟಲ್ವಾಡ್ ಅವರ ನಿವಾಸಕ್ಕೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಆಗಮಿಸಿದ್ದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಎಟಿಎಸ್ ತಂಡ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ ಎಂದು ವರದಿಯಾಗಿದೆ.

2002 ರ ಗುಜರಾತ್ ದಂಗೆಗಳ ಬಗ್ಗೆ ಸೆಟಲ್ವಾಡ್ ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಆಗ ನರೇಂದ್ರ  ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com