ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: 16 ಬಂಡಾಯ ಶಾಸಕರಿಗೆ ಅನರ್ಹತೆ ನೋಟಿಸ್!
ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪಿನ ಬಂಡಾಯದಿಂದ ಉಂಟಾದ ಮಹಾರಾಷ್ಟ್ರದ ರಾಜಕೀಯ ಪ್ರಕ್ಷುಬ್ಧತೆಯು ನಿರ್ಣಯದತ್ತ ಸಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.
Published: 25th June 2022 04:55 PM | Last Updated: 25th June 2022 05:03 PM | A+A A-

ಶಿವಸೇನೆ ಬಂಡಾಯ ಶಾಸಕರು
ಮುಂಬೈ: ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪಿನ ಬಂಡಾಯದಿಂದ ಉಂಟಾದ ಮಹಾರಾಷ್ಟ್ರದ ರಾಜಕೀಯ ಪ್ರಕ್ಷುಬ್ಧತೆಯು ನಿರ್ಣಯದತ್ತ ಸಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.
ಪ್ರಸ್ತುತ ಅಸ್ಸಾಂನ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬೀಡುಬಿಟ್ಟಿರುವ ಏಕನಾಥ್ ಶಿಂಧೆ ಶಿಬಿರದ 16 ಬಂಡಾಯ ಶಿವಸೇನೆ ಶಾಸಕರಿಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆ ನೋಟಿಸ್ ಜಾರಿ ಮಾಡಿದ್ದು ಜೂನ್ 27ರೊಳಗೆ ತಮ್ಮ ಲಿಖಿತ ಉತ್ತರಗಳನ್ನು ಸಲ್ಲಿವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ಏಕನಾಥ್ ಶಿಂಧೆ ಬಣಕ್ಕೆ 'ಶಿವಸೇನಾ ಬಾಳಾಸಾಹೇಬ್' ಹೆಸರು ನೀಡಲು ಬಂಡಾಯ ಶಾಸಕರು ಮುಂದು
ಇತರ ಬಂಡಾಯ ಶಾಸಕರೊಂದಿಗೆ ಬೀಡುಬಿಟ್ಟಿರುವ ಸೇನಾ ಬಂಡಾಯ ಶಾಸಕ ತಾನಾಜಿ ಸಾವಂತ್ ಅವರ ಕಚೇರಿಯನ್ನು ಇಂದು ಸೇನಾ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಮುಂಬೈ ಪೊಲೀಸರು ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿರುವ ಶಿಂಧೆ ತಮ್ಮೊಂದಿಗೆ ಬೀಡುಬಿಟ್ಟಿರುವ 38 ಶಾಸಕರ ಕುಟುಂಬ ಸದಸ್ಯರ ಭದ್ರತೆಯನ್ನು ದುರುದ್ದೇಶಪೂರ್ವಕವಾಗಿ ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಶಿಂಧೆ ಸೇರಿದಂತೆ ಹಲವು ಶಿವಸೇನೆ ಮತ್ತು ಎಂವಿಎ ನಾಯಕರ ಮನೆಗಳ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.