ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ
ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ತಮಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ...
Published: 26th June 2022 10:43 PM | Last Updated: 26th June 2022 10:43 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ತಮಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸರಿಸುಮಾರು 12,000 ವಿದ್ಯಾರ್ಥಿಗಳು ಉಕ್ರೇನ್ ನಿಂದ ಬಂದಿದ್ದಾರೆ ಮತ್ತು ದೇಶದಲ್ಲಿ ಕನಿಷ್ಠ 600 ವೈದ್ಯಕೀಯ ಕಾಲೇಜುಗಳಿರುವುದರಿಂದ ಪ್ರತಿ ಸಂಸ್ಥೆಯು ಸುಮಾರು 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಬೆಂಗಳೂರು: ಉಕ್ರೇನ್ ನಲ್ಲಿ ಮೃತಪಟ್ಟಿದ್ದ ನವೀನ್ ಕುಟುಂಬ ಭೇಟಿ ಮಾಡಿದ ಪ್ರಧಾನಿ ಮೋದಿ
ಪ್ರತಿಭಟನೆಯಲ್ಲಿ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇವರಲ್ಲಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ರಾಜಸ್ಥಾನದ 35 ವಿದ್ಯಾರ್ಥಿಗಳು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಿದರು ಎಂದು ಉಕ್ರೇನ್ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರ ಸಂಘದ(PAUMS)ಅಧ್ಯಕ್ಷ ಆರ್ ಬಿ ಗುಪ್ತಾ ತಿಳಿಸಿದ್ದಾರೆ.
"ನಾವು ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಮೆರವಣಿಗೆಯನ್ನೂ ನಡೆಸಿದ್ದೇವೆ. ನಮ್ಮ ಮಕ್ಕಳಿಗೆ ಪ್ರವೇಶ ಕಲ್ಪಿಸಲು ನಮಗೆ ಸರ್ಕಾರದ ಸಹಾಯ ಬೇಕು. ನನ್ನ ಮಗ ಇವಾನೋ (ಉಕ್ರೇನಿಯನ್ ನಗರದಲ್ಲಿ) ಎರಡನೇ ವರ್ಷ ಓದುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಒಂದೇ ಬಾರಿಗೆ ಪ್ರವೇಶ ಕಲ್ಪಿಸಬೇಕೆಂದು ನಾವು ಸರ್ಕಾರಕ್ಕೆ ವಿನಂತಿಸುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.