ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ
ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ...
Published: 26th June 2022 01:02 AM | Last Updated: 26th June 2022 01:02 AM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮ್ಯೂನಿಚ್‌ನಲ್ಲಿ ನಡೆಯಲಿರುವ ಭಾರತೀಯ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದು ಕೋವಿಡ್-19ರ ನಂತರದ ಅತಿದೊಡ್ಡ ಕಾರ್ಯಕ್ರಮವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನು ಓದಿ: ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ
ಪ್ರಧಾನಿ ನರೇಂದ್ರ ಮೋದಿಯವರು ಜೂನ್ 26 ಮತ್ತು 27 ರಂದು ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜರ್ಮನಿಗೆ ಪ್ರಯಾಣಿಸುತ್ತಿದ್ದಾರೆ. ಜೂನ್ 28 ರಂದು ಯುಎಇಗೆ ಪ್ರಯಾಣಿಸಲಿದ್ದು, ಗಲ್ಫ್ ರಾಷ್ಟ್ರದ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಜರ್ಮನಿ ಮತ್ತು ಯುಎಇಯಲ್ಲಿ ಸುಮಾರು 60 ಗಂಟೆಗಳ ಕಾಲ ವಾಸ್ತವ್ಯ ಹೂಡಲಿದ್ದು, ಈ ಸಮಯದಲ್ಲಿ ವಿಶ್ವದ ಏಳು ಶ್ರೀಮಂತ ರಾಷ್ಟ್ರಗಳ ಗುಂಪಿನ ಜಿ 7 ಶೃಂಗಸಭೆಯಲ್ಲಿ ಭಾಗಿಯಾಗುವುದರ ಜೊತೆಗೆ ಅನೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭಾರತದ ಜೊತೆಗೆ, ಜರ್ಮನಿಯು ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾವನ್ನು ಜಾಗತಿಕ ದಕ್ಷಿಣದ ಪ್ರಜಾಪ್ರಭುತ್ವಗಳನ್ನು ತನ್ನ ಪಾಲುದಾರರನ್ನಾಗಿ ಗುರುತಿಸಲು ಶೃಂಗಸಭೆಗೆ ಅತಿಥಿಗಳನ್ನಾಗಿ ಆಹ್ವಾನಿಸಿದೆ.