ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಹಸ್ತಾಂತರ
ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ.
Published: 26th June 2022 11:20 AM | Last Updated: 26th June 2022 11:22 AM | A+A A-

ತೀಸ್ತಾ ಸೆಟಲ್ವಡ್
ಅಹಮದಾಬಾದ್: ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಆಕೆಯ ವಿರುದ್ಧ ಹೊಸದಾಗಿ ದಾಖಲಾಗಿರುವ ವಂಚನೆ, ಕ್ರಿಮಿನಲ್ ಪಿತೂರಿ ಕೇಸ್ ಗೆ ಸಂಬಂಧಿಸಿದಂತೆ ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ನೀಡಲಾಗಿದೆ.
ಇದನ್ನೂ ಓದಿ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ
ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಡಿ. ಬಿ. ಬರಾದ್ ದಾಖಲಿಸಿದ ದೂರಿನ ಆಧಾರದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದಲ್ಲಿ ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಇಲ್ಲಿಗೆ ಅವರನ್ನು ಕರೆತಂದ ನಂತರ ಇಂದು ಬೆಳಗ್ಗೆ ನಗರ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧನಕ್ಕೊಳಪಡಿಸಲಾಗುವುದು ಎಂದು ಅಪರಾಧ ವಿಭಾಗದ ಮೂಲಗಳು ತಿಳಿಸಿವೆ.
ಶನಿವಾರ ಮುಂಬೈಯಲ್ಲಿ ತೀಸ್ತಾ ಸೆಟಲ್ವಡ್ ಅವರನ್ನು ಬಂಧಿಸಿದ ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸುವ ಸಲುವಾಗಿ ಅವರನ್ನು ಸಾಂತಾಕ್ರೂಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಗುಜರಾತ್ ಪೊಲೀಸರು ರಸ್ತೆ ಮೂಲಕ ಅಹಮದಾಬಾದ್ ಗೆ ಕರೆದೊಯ್ದಿದ್ದಾರೆ.