
ನಾಮಪತ್ರ ಸಲ್ಲಿಸುತ್ತಿರುವ ಯಶವಂತ್ ಸಿನ್ಹಾ.
ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಶವಂತ್ ಸಿನ್ಹಾ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.
ದೆಹಲಿಯಲ್ಲಿ ಚುನಾವಣಾಧಿಕಾರಿಗೆ ಯಶವಂತ್ ಸಿನ್ಹಾ ನಾಮಪತ್ರ ಸೋಮವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
Opposition's Presidential polls candidate Yashwant Sinha files his nomination at the Parliament in Delhi pic.twitter.com/2BGztPZwmB
— ANI (@ANI) June 27, 2022
ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಆಡಳಿತಾರೂಢ ಎನ್'ಡಿಎ ಪಕ್ಷದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ನಾಮಪತ್ರ ಸಲ್ಲಿಸಿದ್ದಾರೆ.