ಸಂಜಯ್ ರಾವುತ್
ದೇಶ
ಗುವಾಹಟಿ ದಾರಿ ಹಿಡಿಯುವುದಿಲ್ಲ: ಇ.ಡಿ ಸಮನ್ಸ್ ಗೆ ಸಂಜಯ್ ರಾವುತ್ ಹೀಗೇಕೆ ಹೇಳಿದ್ದು ಅಂದರೆ...
ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ.
ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ತಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ಹೇಳಿದ್ದಾರೆ.
ಗುವಾಹಟಿಯಲ್ಲಿ ಶಿವಸೇನೆಯ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದು, ರಾವುತ್ ಗೆ ಬೆದರಿಕೆ ಹಾಕುವ ಯತ್ನದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿಗೊಳಿಸಿದೆ ಎಂದು ರಾವುತ್ ಅವರ ಸಹೋದರ ಸುನಿಲ್ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ ನನಗೆ ಸಮನ್ಸ್ ಜಾರಿಗೊಳಿಸಿದೆ ಎಂಬುದನ್ನು ಈಗಷ್ಟೇ ತಿಳಿದುಕೊಂಡೆ. ಮಹಾರಾಷ್ಟ್ರದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾವೆಲ್ಲಾ ಬಾಳಾಸಾಹೇಬರ ಶಿವಸೈನಿಕರು. ಜಾರಿ ನಿರ್ದೇಶನಾಲಯದ ಸಮನ್ಸ್ ಷಡ್ಯಂತ್ರವಾಗಿದ್ದು, ನನ್ನ ಶಿರಚ್ಛೇದ ಮಾಡಿದರೂ ನಾನು ಗುವಾಹಟಿ ಮಾರ್ಗ ಹಿಡಿಯುವುದಿಲ್ಲ ಎಂದು ರಾವುತ್ ಟ್ವೀಟ್ ನಲ್ಲಿ ತಿಳಿಸಿದ್ದು ದೇವೇಂದ್ರ ಫಡ್ನವಿಸ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ತಮ್ಮನ್ನು ಬಂಧಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸಂಜಯ್ ರಾವುತ್ ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ